ಸುದ್ದಿಮೂಲ ವಾರ್ತೆ
ಕೆ.ಆರ್.ಪುರ ಮೇ 24: ಅಹಿಂದ ನಾಯಕ ಹಾಗೂ ಬಲಿಜ ಸಮಾಜದ ಎಂ.ಆರ್. ಸೀತಾರಾಂ ಅವರನ್ನು ವಿಧಾನ ಪರಿಷತ್ತಿನ ಸದಸ್ಯರಾಗಿ ನೇಮಕ ಮಾಡಿ ಸಚಿವ ಸಚಿವ ಸ್ಥಾನ ನೀಡುವಂತೆ ಕೆ.ಆರ್.ಪುರದ ಬಲಿಜ ಸಮಾಜದ ವತಿಯಿಂದ ಮನವಿ ಮಾಡಲಾಗಿದೆ.
ಅಲ್ಲದೆ, ಕರ್ನಾಟಕದ ರಾಜ್ಯ ಬಲಿಜ ಯುವಶಕ್ತಿ ಸಂಘದ ರಾಜ್ಯಾಧ್ಯಕ್ಷ ಡಾ.ಕೆ.ಟಿ ರಾಜ್ ಕುಮಾರ್ ಅವರಿಗೆ ಬಲಿಜ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡುವಂತೆ ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಗಿದೆ.
ಎಂ.ಆರ್. ಸೀತಾರಂರವರು ರಾಜ್ಯದ ಮೂಲೆ ಮೂಲೆಗಳಲ್ಲಿ ಸುತ್ತಾಡಿ ಬಲಿಜ ಸಮಾಜದ ಹೆಚ್ಚಿನ ಮತಗಳು ಕಾಂಗ್ರೆಸ್ ಪಕ್ಷದ ಪರವಾಗಿ ಹಾಕಿಸಲು ಶ್ರಮವಹಿಸಿದ್ದಾರೆ. ಅದರಲ್ಲೂ ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡುವಲ್ಲಿ ಪ್ರಮುಖ ಪಾತ್ರವಹಿಸಿ, ಪಕ್ಷವನ್ನು ಅಧಿಕಾರಕ್ಕೆ ತರಲು ಶಕ್ತಿ ಮೀರಿ ಶ್ರಮ ಪಟ್ಟವರಲ್ಲಿ ಇವರು ಮೊದಲಿಗರು. ಮುಂದಿನ ಲೋಕಸಭಾ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಯ ಚುನಾವಣೆ ಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಲಾಭ ಆಗಿರುವುದರಿಂದ ಸೀತಾರಾಂ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿ ಸಮಾಜದಿಂದ ಒತ್ತಾಯಿಸಲಾಯಿತು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪ್ರದೀಪ್ ಈಶ್ವರ್ ರವರಿಗೂ ಬಲಿಜ ಸಮಾಜದ ವತಿಯಿಂದ ಸಚಿವ ಸಂಪುಟದಲ್ಲಿ ಮಂತ್ರಿಸ್ಥಾನವನ್ನು ನೀಡುವಂತೆ ಆಗ್ರಹಿಸಲಾಯಿತು.
ಕರ್ನಾಟಕ ರಾಜ್ಯ ಬಲಿಜ ಯುವಶಕ್ತಿಯ ರಾಜ್ಯಾಧ್ಯಕ್ಷ ಡಾ.ಕೆ.ಟಿ. ರಾಜ್ಕುಮಾರ್ ಯಾವುದೇ ರಾಜಕೀಯ ಅಧಿಕಾರವಿಲ್ಲದಿದ್ದರೂ ಲಕ್ಷಾಂತರ ಹಣವನ್ನು ಖರ್ಚು ಮಾಡಿಕೊಂಡು ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಮಾಜ ಸೇವಾ ಕಾರ್ಯಗಳನ್ನು ಮಾಡಬೇಕು ಎನ್ನುವ ತುಡಿತದಿಂದ ಈ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿರುವ ಅವರಿಗೆ ಬಲಿಜ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡಲು ಈ ಮೂಲಕ ಒತ್ತಾಯಿಸುತ್ತೇವೆ.
ಈ ಎಲ್ಲಾ ಬೇಡಿಕೆಗಳನ್ನು ಒತ್ತಾಯಿಸಿ ರಾಜ್ಯದ ಎಲ್ಲಾ ಜಿಲ್ಲೆಗಳ ಬಲಿಜ ಮುಖಂಡರು ಹಾಗೂ ಕಾರ್ಯ ಕರ್ತರು ನೇರವಾಗಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಿದ್ದಾರೆ ಎಂದು ಸಮಾಜದ ಮುಖಂಡರಾದ ಕೆ.ಎನ್.ಪ್ರಕಾಶ್ ತಿಳಿಸಿದ್ದಾರೆ.