ಸುದ್ದಿಮೂಲ ವಾರ್ತೆ
ಹೊಸಕೋಟೆ : ಹೊಸಕೋಟೆ ತಾಲೂಕಿನ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಊರಿಗೊಂದು ವನ ಊರಿಗೊಂದು ಕೆರೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗುರುರಾಜ್ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ಹಾಗೂ ನಗರ ಆಶಾ ಕಾರ್ಯಕರ್ತೆಯರೊಂದಿಗೆ ಕಪ್ಪು ಪಟ್ಟಿಯನ್ನು ಧರಿಸಿ, ಗಿಡಕ್ಕೆ ನೀರುಣಿಸಿ, ಸದರಿ ವಿಷಯಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡುವ ಮೂಲಕ ಅರ್ಥಗರ್ಭಿತವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಆರ್ ಬಿ ಎಸ್ ಕೆ ವೈದ್ಯಾಧಿಕಾರಿಗಳಾದ ಡಾಕ್ಟರ್ ಶ್ವೇತ, ತಾಲೂಕು ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ರವಿಕುಮಾರ್ , ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಲತಾ, ತಾಲೂಕು ಆಶಾ ಮೇಲ್ವಿಚಾರಕರಾದ ಶ್ರೀಮತಿ ಮಹಾದೇವಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಶೈಲಜಾ, ಶುಶ್ರುಷಕ ಅಧಿಕಾರಿ ಶ್ರೀಮತಿ ಭವ್ಯ, ಡಾಟಾ ಎಂಟ್ರಿ ಸಿಬ್ಬಂದಿ ಕುಮಾರಿ ತನುಜ ಸೇರಿದಂತೆ ನಗರ ಆಶಾ ಕಾರ್ಯಕರ್ತೆಯರು ಹಾಜರಿದ್ದರು.