ಸುದ್ದಿಮೂಲವಾರ್ತೆ
ಕೊಪ್ಪಳ ಮೇ 25 : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮೇ 25ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡರು.
ತಾಲೂಕಿನ ಬಿ ಹೊಸಳ್ಳಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಮೇ 25ರಂದು ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಸ್ಥಳಕ್ಕೆ ಭೇಟಿ ನೀಡಿ
ನರೇಗಾ ಕೂಲಿಕಾರರ ಜೊತೆಗೆ ಚರ್ಚಸಿದರು.
ಈ ವೇಳೆ ಮಾತನಾಡಿದ ಸಿಇಓ ಅವರು, ಆರೋಗ್ಯ ಬಗ್ಗೆ ಪ್ರತಿಯೊಬ್ಬರು ವೈಯಕ್ತಿಕ ಗಮನ ಹರಿಸಬೇಕು. ಬಿ.ಪಿ, ಶುಗರ್, ಸಣ್ಣಪುಟ್ಟ ಕಾಯಿಲೆಗಳಾದ ಜ್ವರ, ನೆಗಡಿ, ಕೆಮ್ಮು ಇತ್ಯಾದಿಯ ಬಗ್ಗೆ ನಿರ್ಲಕ್ಷ್ಯ ವಹಿಸದೇ ಕಾಲಕಾಲಕ್ಕೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.
ಇದೆ ವೇಳೆ ಸಿಇಓ ಅವರು ಬಹದ್ದೂರಬಂಡಿ, ಹೊಸಹಳ್ಳಿ, ಹುಲಿಗಿ, ಹಿಟ್ನಾಳ ಗ್ರಾಮ ಪಂಚಾಯತಿಯ ವಿವಿಧೆಡೆ ನಡೆಯುತ್ತಿದ್ದ ನರೇಗಾ ಕಾಮಗಾರಿ ಸ್ಥಳಗಳಿಗೆ ಸಹ ಭೇಟಿ ನೀಡಿ ಕೂಲಿ ಕಾರ್ಮಿಕರ ಅಹವಾಲು ಆಲಿಸಿದರು.
ಹಿರೇಸಿಂಧೊಗಿ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರದ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಆಟವಾಡಿ ಖುಷಿಪಟ್ಟರು. ಕಂಪ್ಯೂಟರ್ ಬಳಕೆ ಮಾಡಲು ಮಕ್ಕಳಿಗೆ ಸಲಹೆ ಮಾಡಿದರು.
ಜಮೀನಿಗೆ ಭೇಟಿ: ಬದು ನಿರ್ಮಾಣ ಕಾಮಗಾರಿ ಕೈಗೊಂಡ ರೈತರ ಜಮೀನಿಗೆ ಸಹ ಭೇಟಿ ನೀಡಿ ಪರಿಶೀಲಿಸಿದರು. ಬೆಳೂರು ಗ್ರಾಮದ ತುಂಗಭದ್ರಾ ಡ್ಯಾಂ ಹಿನ್ನೀರಿನ ಸ್ಥಳಕ್ಕೆ ಸಹ ಸಿಇಓ ಅವರು ಜೆಸ್ಕಾಂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬಿಸರಳ್ಳಿ ಗ್ರಾಮದಲ್ಲಿನ ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಬಿಸರಳ್ಳಿ ಗ್ರಾಮದಲ್ಲಿನ ಜೆಜೆಎಂ ಕಾಮಗಾರಿಯ ಬಗ್ಗೆ ಸಹ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ, ಪಂಚಾಯತ ರಾಜ್ ಸಹಾಯಕ ನಿರ್ದೇಶಕರು, ನರೇಗಾ ಸಹಾಯಕ ನಿರ್ದೇಶಕರು, ಎಸ್ಬಿಎಂ ನೋಡಲ್ ಅಧಿಕಾರಿ, ಪಿಡಿಓಗಳು, ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರುಗಳು, ಎಸ್ಬಿಎಂ ಸಮಾಲೋಚಕರು ಹಾಜರಿದ್ದರು.