ಚಿಕ್ಕಬಳ್ಳಾಪುರ, ಮೇ 26 :ಕೆಪಿಸಿಸಿ ಮಾಜಿ ಅಧ್ಯಕ್ಷರು ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ 6ನೇ ಬಾರಿ ಗೆಲುವು ಸಾಧಿಸಿರುವ ಕಾಂಗ್ರೆಸ್ಸಿನ ಹಿರಿಯ ಮುಖಂಡರು ಆಗಿರುವ ದಿನೇಶ್ ಗುಂಡೂರಾವ್ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಚಿಕ್ಪೇಟ್ ವಿಧಾನಸಭಾ ಕ್ಷೇತ್ರದ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಹ ಕಾರ್ಯದರ್ಶಿ ಪಿ.ಆರ್. ಪ್ರಕಾಶ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ನಾಯಕ ಎಲ್.ಜಯಸಿಂಹ ಆಗ್ರಹಿಸಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಸರ್ಕಾರದಲ್ಲಿ ಆಹಾರ ಸಚಿವರಾಗಿ ಕರ್ನಾಟಕವನ್ನು ಹಸಿವು ಮುಕ್ತ ಮಾಡಲು ಅನ್ನಭಾಗ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಕೀರ್ತಿ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲುತ್ತದೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿ.ಪಿ.ಎಲ್ ಕುಟುಂಬದ ಸದಸ್ಯರಿಗೆ ತಲಾ ೧೦ ಕೆಜಿ ಅಕ್ಕಿ ನೀಡುವ ಗ್ಯಾರಂಟಿಯನ್ನು ಈಗಾಗಲೇ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಅನುಭವಿ ಆಗಿರುವ ಹಿರಿಯ ಶಾಸಕ ದಿನೇಶ್ ಗುಂಡೂರಾವ್ ಅವರನ್ನು ಸಚಿವ ಸ್ಥಾನವನ್ನು ನೀಡಿ ಬ್ರಾಹ್ಮಣರ ಸಮಾಜಕ್ಕೆ ಅವಕಾಶ ಕಲ್ಪಿಸಬೇಕೆಂದು ಅಕಬ್ರಾಮಸ ಸಹ ಕಾರ್ಯದರ್ಶಿ ಪಿ.ಆರ್.ಪ್ರಕಾಶ್ ಹಾಗೂ ಎಲ್.ಜಯಸಿಂಹ ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯದ ಆಹಾರ ಸಚಿವರಾಗಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿ ಅನೇಕ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಜೊತೆಗೆ ವೇಗವನ್ನು ಹೆಚ್ಚಿಸಿದ ಶಾಸಕ ದಿನೇಶ್ ಗುಂಡೂ ರಾವ್ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಿ ಕರ್ನಾಟಕವನ್ನು ಪ್ರಗತಿ ಪಥದತ್ತ ಕೊಂಡ್ಯೂಯಲು ಸಹಕಾರ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.