ಸುದ್ದಿಮೂಲ ವಾರ್ತೆ,
ಮೈಸೂರು, ಮೇ 26: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 390ನೇ ರ್ಯಾಂಕ್ ಗಳಿಸಿ ಮೈಸೂರಿಗೆ ಕೀರ್ತಿ ತಂದಿರುವ ಎಂ.ಪೂಜಾ ಅವರನ್ನು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಅಭಿನಂದಿಸಿದರು.
ಮಹಾಪೌರ ಶಿವಕುಮಾರ್, ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್,ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ
ವಾಣೀಶ್ ಕುಮಾರ್, ವಿ.ಸೋಮಸುಂದರ್,ಪ್ರದೀಪ್ ಕುಮಾರ್,ಕೆ.ಜೆ.ರಮೇಶ್ ಇನ್ನಿತರರು ಇದ್ದರು.