ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,ಮೇ 30: ತಾಲ್ಲೂಕಿನ ಈ.ತಿಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಕೆರೆ ಗ್ರಾಮದಲ್ಲಿ ಅಮೃತ ಆರೋಗ್ಯ ಅಭಿಯಾನದಡಿ ಆಯೋಜಿಸಿದ ಉಚಿತ ಆರೋಗ್ಯ ತಪಾಸಣೆಯ ಮೂಲ ಉದ್ದೇಶವೆಂದರೆ ಕೂಲಿಕಾರರು ತಮ್ಮ ದೇಹದ ಆರೋಗ್ಯ ಸಂರಕ್ಷಣೆಯಲ್ಲಿ ಉತ್ತಮ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು. ನರೇಗಾ ಉದ್ಯೋಗ ಖಾತ್ರಿ ಅಡಿಯಲ್ಲಿ ಕೂಲಿ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ಸ್ಥಳದಲ್ಲಿ ಮಹಿಳೆಯರು, ಪುರುಷರು 52 ಜನ ಕೂಲಿ ಕಾರ್ಮಿಕರಿಗೆ ಸ್ಥಳದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕೂಲಿ ಕಾರ್ಮಿಕರಿಗೆ ಅವರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ, ಕಾಮಗಾರಿ ಸ್ಥಳಗಳಲ್ಲಿ ಗ್ರಾಮ ಆರೋಗ್ಯ ಶಿಬಿರಗಳನ್ನು ಅಯೋಜಿಸಲಾಯಿತು.
ಕೂಲಿಕಾರರಿಗೆ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆ ಇನ್ನು ಮುಂತಾದ ಪರೀಕ್ಷೆಗಳನ್ನು ಏಕ ಕಾಲಕ್ಕೆ ಮಾಡಲಾಯಿತು. ಮಧ್ಯಾಹ್ನದ ವೇಳೆಗೆ ಸುಮಾರು 52 ನರೇಗಾ ಕೂಲಿಕಾರರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗಿಯಾಗಿದ್ದು, ಸಂಜೆ ವೇಳೆಗೆ ಶೇಕಡಾವಾರು 100ರಷ್ಷು ಆರೋಗ್ಯ ತಪಾಸಣಾ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಈ.ತಿಮ್ಮಸಂದ್ರ ಗ್ರಾಮ ಪಂಚಾಯತಿಯ ಕಾರ್ಯದರ್ಶಿಗಳು, ನರೇಗಾ ತಾಂತ್ರಿಕ ಸಹಾಯಕರು, ಬಿಲ್ ಕಲೆಕ್ಟರ್, ತಾಲ್ಲೂಕು ನರೇಗಾ ಸಂಯೋಜಕರಾದ ಲೋಕೇಶ, ಬಿ ಎಫ್ ಟಿ, ಕಾಯಕ ಮಿತ್ರ ಗ್ರಾಮ ಪಂಚಾಯಿತಿ ಸದಸ್ಯರು, ಆರೋಗ್ಯ ಸಿಬ್ಬಂದಿಯ ಪಿ ಎಚ್ ಸಿ ಓ, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.