ಸುದ್ದಿಮೂಲವಾರ್ತೆ
ಕೊಪ್ಪಳ ಮೇ 31: ಕೊಪ್ಪಳದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ನಿಗಮದ ಕಾರ್ಯನಿರ್ವಾಹಕ ಇಂಜಿನೀಯರ್ ಝೆಡ್ ಎಂ ಚಿಂಚೋಳಿಕರ್ ಕಚೇರಿ ಹಾಗು ಮನೆಯ ಮೇಲೆ ರಾಯಚೂರು ಲೋಕಾಯುಕ್ತ ವರಿಷ್ಠಾಧಿಕಾರಿ ನೇತ್ರತ್ವದಲ್ಲಿ ದಾಳಿ ಮಾಡಲಾಯಿತು.
ಕಳೆದ ನಾಲ್ಕು ವರ್ಷದಿಂದ ಇಲ್ಲಿ ಕಾರ್ಯನಿರ್ವಾಹಕ ಇಂಜಿನೀಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಅಕ್ರಮ ಆಸ್ತಿ ಗಳಿಸಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.
ಕೊಪ್ಪಳದ ಕಚೇರಿ, ಚಿಂಚೋಳಿಕರ್ ವಾಸವಾಗಿರುವ ಬಾಡಿಗೆ ಮನೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಚಿಂಚೋಳಿಕರ್ ಸಂಬಂಧಿಸಿದ ಬೀದರ,ಕಲಬುರಗಿ ಮನೆಯ ಮೇಲೆಯೂ ತಪಾಸಣೆ ಮಾಡಿದ್ದಾರೆ. ಬಾಡಿಗೆ ಮನೆಯಲ್ಲಿ ಯಾರೂ ಇರಲಿಲ್ಲ. ಕಚೇರಿಯಲ್ಲಿ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.