ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,1: ತಾಲ್ಲೂಕಿನ ಚೀಮಂಗಲ ಗ್ರಾಮದ ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವದ ಅಂಗವಾಗಿ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಿ.ಎನ್.ರವಿಕುಮಾರ್ ರವರು ತಮ್ಮ ಎಚ್. ಡಿ ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಟ್ರಸ್ಟ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ.ಎನ್ ರವಿಕುಮಾರ್ ರವರು ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಸರ್ಕಾರಿ ಶಾಲೆಗಳಲ್ಲೇ ಪ್ರಾರಂಭಿಸಬೇಕು.ಅದಕ್ಕಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು.ಅವರ ವೇತನದ ವೆಚ್ಚವನ್ನು ನಾನೇ ಭರಿಸುತ್ತೇನೆ.ಪೋಷಕರು ಖಾಸಗಿ ಶಾಲೆಯತ್ತ ತಿರುಗಿ ನೋಡದ ಹಾಗೆ ಸರ್ಕಾರಿ ಶಾಲೆಗಳನ್ನು ಉತ್ತಮಗೊಳಿಸಲು ಶಿಕ್ಷಕರು ಸಹಕಾರ ನೀಡಬೇಕು’ ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ ಒಟ್ಟು 264 ಶಾಲೆಗಳು ಆ ಶಾಲೆಯಲ್ಲಿ ಸುಮಾರು 11950 ವಿದ್ಯಾರ್ಥಿಗಳು ಇದ್ದಾರೆ ನಮ್ಮ ಕ್ಷೇತ್ರಕ್ಕೆ ಬರುವಂತಹ ಚಿಲಕಲನೇರ್ಪು ಹೋಬಳಿಯಲ್ಲಿ ಸುಮಾರು 51 ಶಾಲೆಗಳು ಇದ್ದು ಆ ಶಾಲೆಯಲ್ಲಿ ಸುಮಾರು 1555ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ಅವರಿಗೂ ಸಹಾ ನಮ್ಮಎಚ್ ಡಿ ಡಿ ಮತ್ತು ಜೆಪಿಎನ್ ಟ್ರಸ್ಟ್ ವತಿಯಿಂದ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ಗಳನ್ನು ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.
‘ಪೋಷಕರು ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕೆಂದು ಆಸೆ ಪಟ್ಟು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಎಷ್ಟು ಸಾಧ್ಯವ ಅಷ್ಟು ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಸೇರಿಸುವ ರೀತಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಬೇಕು ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ಓದಿಸುತ್ತಿರುವ ಪೋಷಕರು ಅಲ್ಲಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸುವ ರೀತಿಯಲ್ಲಿ ಶಾಲೆಗಳನ್ನು ಉತ್ತಮಪಡಿಸಬೇಕು ಎಂದು ಹೇಳಿದರು.
ಆಟದ ಮೈದಾನಕ್ಕೆ ಮನವಿ:ಸುತ್ತಮುತ್ತಲಿನ ಹನ್ನೆರಡು ಹಳ್ಳಿಗಳಿಂದ ಚೀಮಂಗಲ ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳು ಬರುತ್ತಾರೆ. ಬಸ್ಸು ವ್ಯವಸ್ಥೆ ಅನುಕೂಲವಿದ್ದರೆ ಶಾಲೆಗೆ ಇನ್ನಷ್ಟು ಹಳ್ಳಿ ವಿದ್ಯಾರ್ಥಿಗಳು ಶಾಲೆಗೆ ಬರಲು ಅನುಕೂಲವಾಗುತ್ತದೆ.ಬಸ್ ಅನುಕೂಲ ಮಾಡಿಕೊಡುವಂತೆ ಶಾಲೆಯ ಎಸ್ ಡಿ ಎಂ ಸಿ ವತಿಯಿಂದ ಮನವಿ ನಿಲ್ಲಿಸಲಾಯಿತು. ಸುಮಾರು 150 ವಿದ್ಯಾರ್ಥಿಗಳಿರುವ ಶಾಲೆಗೆ ಆಟದ ಮೈದಾನದ ಅಗತ್ಯವಿದೆ ಎಂದು ಗ್ರಾಮಸ್ಥರು ಶಾಸಕರಾದ ಬಿ.ಎನ್ ರವಿಕುಮಾರ್ ರವರಿಗೆ ಮನವಿ ಪತ್ರವನ್ನು ನೀಡಲಾಯಿತು.
ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಸಕ ಬಿ.ಎನ್ ರವಿಕುಮಾರ್ ರವರು ತಮ್ಮ ಎಚ್ ಡಿ ಡಿ ಮತ್ತು ಜೆಪಿಎನ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಹಾಗೂ ಲೇಖನ ಸಾಮಗ್ರಿ ವಿತರಣೆ ಮಾಡಿ ನಂತರ ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟದ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳ ಜೊತೆಯಲ್ಲಿ ಕುಳಿತು ಊಟ ಮಾಡಿದ ಶಾಸಕ ಬಿ.ಎನ್ ರವಿಕುಮಾರ್.
ನಂತರ ಬಶೆಟ್ಟಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಸಕ ಬಿ ಎಂ ರವಿಕುಮಾರ್ ರವರು ತಮ್ಮ ಎಚ್ ಡಿ ಡಿ ಮತ್ತು ಜೆಪಿಎನ್ ಟ್ರಸ್ಟ್ ವತಿಯಿಂದ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣೆ ಮಾಡಿ ನಂತರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಶಾಸಕ ಬಿ.ಎನ್ ರವಿ ಕುಮಾರ್ ರವರು ಸನ್ಮಾನ ಮಾಡಿ ಹಾಗೂ ಅಭಿನಂದನೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಇಓ ಮುನಿರಾಜು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ,ತಾದೂರು ರಘು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್,ಉಪಾಧ್ಯಕ್ಷೆ ಸುಮಿತ್ರಾ ಮಂಜುನಾಥ್, ಸದಸ್ಯೆ ಅಯ್ಯಣ್ಣ,ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸುಬ್ಬಾರೆಡ್ಡಿ,ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್, ಶ್ರೀನಿವಾಸ್,ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಪಿಡಿಓ ತನ್ವೀರ್ ಅಹಮದ್, ಅಕ್ಷರ ದಾಸೋಹ ಸಹಾಯ ನಿರ್ದೇಶಕ ಅಂಜನೇಯ, ಯುವ ಮುಖಂಡ ಕುಂದಲಗುರ್ಕಿ ಚಂದ್ರು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಿ. ಬಿ ವೆಂಕಟೇಶ್,ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ವಿ ನಾರಾಯಣಸ್ವಾಮಿ, ಭಕ್ತರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್, ಶಿಕ್ಷಕರಾದ ಶಿವಶಂಕರ್. ಗಜೇಂದ್ರ ಹಾಗೂ ಶಾಲೆ ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು,ಹಾಜರಿದ್ದರು.