ಸುದ್ದಿಮೂಲ ವಾರ್ತೆ
ಬೆಂಗಳೂರು,ಜೂ.1: ಭಾರತದಲ್ಲಿನ ಆಸ್ಟ್ರೇಲಿಯನ್ ಹೈ ಕಮಿಷನರ್ ಬ್ಯಾರಿ ಓ ಫಾರೆಲ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ದಕ್ಷಿಣ ಭಾರತದ ಆಸ್ಟ್ರೇಲಿಯನ್ ಕಾನ್ಸಲ್ ಜನರಲ್ ಸಾರಾ ಕಿರ್ಲೆವ್, ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್ ನ ನಿಯೋಜಿತ ಡೆಪ್ಯುಟಿ ಕಾನ್ಸಲ್ ಜನರಲ್ ಹ್ಯುಂಗ್ – ಮಿನ್ ಕಿಮ್, ರಾಜ್ಯದ ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು