ಸುದ್ದಿಮೂಲ ವಾರ್ತೆ
ಕುಷ್ಟಗಿ,ಜೂ. 06: ಕಳೆದ ನಾಲ್ಕೈದು ದಿನಗಳಿಂದ ಕಲುಷಿತ ನೀರು ಸೇವಿಸಿ ಸುಮಾರು ಹದಿನೈದು ಜನ ಅಸ್ವಸ್ಥಗೊಂಡ ಘಟನೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ನಡೆದಿದೆ
ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಬಿಜಕಲ್ ಗ್ರಾಮದಲ್ಲಿ ಕಳೆದೊಂದು ವಾರದಿಂದ ಕಲುಷಿತ ನೀರು ಸೇವನೆಯಿಂದ ವಾಂತಿ ಬೇಧಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕಕ್ಕೊಳಗಾಗಿದ್ದಾರೆ.
ಚಿಕಿತ್ಸೆಗಾಗಿ ಜನ ದೋಟಿಹಾಳ, ಮುದೇನೂರು, ಇಳಕಲ್, ಸಿಂಧನೂರು ಖಾಸಗಿ ಆಸ್ಪತ್ರೆಗಳಲ್ಲಿ ತೆರಳಿದ್ದಾರೆ ಎನ್ನಲಾಗಿದೆ. ಸದ್ಯ ಕುಷ್ಟಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ. ನಿನ್ನೆ ಸೋಮವಾರ ರಾತ್ರಿ ಮಹಿಳೆಯೊಬ್ಬಳು ತೀವ್ರ ವಾಂತಿ ಬೇಧಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾಳೆ. ವಾಂತಿ ಬೇಧಿ ಪ್ರಕರಣ ಹೆಚ್ಚಾಗಲು ಕಲುಷಿತ ನೀರು ಸೇವನೆಯೇ ಕಾರಣ ಎಂದು ಹೇಳಲಾಗುತ್ತಿದೆ.