ಸುದ್ದಿಮೂಲ ವಾರ್ತೆ
ಬೆಂಗಳೂರು,ಜೂ.6: ವಿಕಾಸಸೌಧದಲ್ಲಿ ಇಂದು ಪ್ರಿಯಾಂಕ್ ಖರ್ಗೆಯವರ ನೇತೃತ್ವದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ (RWSS) ಇಲಾಖೆಯ ಹಲವು ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಗ್ರಾಮೀಣ ಮಟ್ಟದಲ್ಲಿ ಸಮರ್ಥ ರೀತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿಸಲು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಬಜೆಟ್ ಮುನ್ನ ಪೂರ್ವಭಾವಿ ತಯಾರಿ ಕುರಿತು ಚರ್ಚೆ ನಡೆಸಲಾಯಿತು.