ಸುದ್ದಿಮೂಲ ವಾರ್ತೆ
ಮಾಲೂರು, ಜೂ.6 : ಮುಂದಿನ ಪೀಳಿಗೆಯ ಉಳಿವಿಗಾಗಿ ಗಿಡ ಮರಗಳನ್ನು ಬೆಳೆಸುವ ಮೂಲಕ ಪರಿಸರ ಉಳಿಸುವಂತೆ ಶಾಸಕ ಕೆ.ವೈ ನಂಜೇಗೌಡ ತಿಳಿಸಿದರು.
ಪರಿಸರ ದಿನಾಚರಣೆ ಅಂಗವಾಗಿ ವಲಯ ಅರಣ್ಯ ಇಲಾಖೆ ವತಿಯಿಂದ ಪಟ್ಟಣದ ಕೆಎಸ್ಆರ್ಟಿಸಿ ಡಿಪೋ ಕೇಂದ್ರೀಯ ತರಬೇತಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾಗರೀಕತೆ ಬೆಳೆದಂತೆ ಕೈಗಾರಿಕೆಗಳು ಬೆಳೆಯುತ್ತಿದೆ. ಕಾಡು ಗಿಡ-ಮರಗಳು , ಶುದ್ಧಗಾಳಿ ಇಲ್ಲದೆ ಉಸಿರಾಟಕ್ಕೆ ತೊಂದರೆ ಆಗುವುದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳ ಬಳಿ ಗಿಡ-ಮರಗಳನ್ನು ಬೆಳೆಸುವುದರಿಂದ ಆಮ್ಲಜನಕ ಉತ್ಪಾದಾನೆಯಾಗಲಿದೆ. ಇದರಿಂದ ಮುಂದಿನ ಪೀಳಿಗೆಗೂ ಅನುಕೂಲವಾಗುತ್ತದೆ ಎಂದರು.
ವಲಯ ಅರಣ್ಯ ಇಲಾಖೆ ಅಧಿಕಾರಿ ಧನಲಕ್ಷ್ಮಿ ಮಾತನಾಡಿ, ಪ್ರಸ್ತುತ ಪರಿಸ್ಥಿತಿ ಹಾಗೂ ಮುಂದಿನ ಭವಿಷ್ಯದಲ್ಲಿ ಒಳ್ಳೆಯ ಹವಾಮಾನಕ್ಕಾಗಿ ಹೆಚ್ಚು ಗಿಡ ಮರಗಳನ್ನು ಬೆಳೆಸಬೇಕು. ಅರಣ್ಯ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಪರಿಸರಸ್ನೇಹಿ ಅಭ್ಯಾಸಗಳನ್ನು ಅನುಸರಿಸುವ ಮೂಲಕ ಪ್ರಕೃತಿ ಸಂಪತ್ತನ್ನು ಉಳಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಅಧಿಕಾರಿಗಳಾದ ವೆಂಕಟರಾಮ್, ಹರೀಶ್, ತರಬೇತಿ ಕೇಂದ್ರದ ಪ್ರಾಂಶುಪಾಲ ಚಂದ್ರಶೇಖರ್, ಸಹಾಯಕ ಜೋಶಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ರಮೇಶ್ ಬಾಬು, ಕೆಪಿಸಿಸಿ ಸದಸ್ಯ ಅಂಜನಿ ಸೋಮಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ಪುರಸಭಾ ಸದಸ್ಯರಾದ ಎ ರಾಜಪ್ಪ, ಜಾಕಿರ್ ಖಾನ್, ಪರಮೇಶ್ ಸಿಬ್ಬಂದಿ ಕೃಷ್ಣಪ್ಪ ಮುನಿರಾಜು ಶ್ರೀನಿವಾಸ್ ಇನ್ನಿತರರು ಭಾಗವಹಿಸಿದ್ದರು.