ಸುಧ್ಧಿಮೂಲ ವಾರ್ತೆ
ಚಿಕ್ಕಬಳ್ಳಾಪುರ,ಜೂ06: ತಾಲೂಕಿನಲ್ಲಿ ಮುಂಬರುವ ದಿನಗಳಲ್ಲಿ ಮಳೆಯಿಂದ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲ್ಲೂಕು ಕೇಂದ್ರಗಳಲ್ಲಿ ತುರ್ತು ನಿರ್ವಹಣಾ/ಸಹಾಯವಾಣಿ ಕೇಂದ್ರಗಳನ್ನು (24X7) ಸ್ಥಾಪಿಸಲು ಜಿಲ್ಲಾಧಿಕಾರಿಗಳು ಸೂಚಿಸಿರುವಂತೆ ತಾಲ್ಲೂಕು ಕಛೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ.
ಸಹಾಯವಾಣಿ ಸಂಖ್ಯೆ: 08156272564 ಆಗಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾದಲ್ಲಿ ಕೂಡಲೇ ಸಹಾಯವಾಣಿ ಕರೆ ಮಾಡಿ ತಿಳಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿರುತ್ತದೆ ಎಂದು ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿಶಾಸ್ತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.