ಸುದ್ದಿಮೂಲ ವಾರ್ತೆ
ಮೈಸೂರು, ಜೂ.11:ಕಾವೇರಿ ನೀರು ತಮಿಳುನಾಡಿಗೆ ನೀಡಲು ನಮ್ಮ ಬಳಿ ನೀರಿಲ್ಲ. ಕೊಡಬಾರದು ಎಂದೇನಿಲ್ಲ. ಆದರೆ ನಮಗೇ ಕೊರತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರುನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ನಮಗೆ ಕುಡಿಯುವ ನೀರು, ನಮ್ಮ ಬೆಳೆಗಳಿಗೆ ನೀರು ಕೊಡುವುದು ಮುಖ್ಯ. ನಮಗೇ ನೀರಿಲ್ಲದಿದ್ದರೆ ತಮಿಳುನಾಡಿಗೆ ಕೊಡುವ ಪ್ರಶ್ನೆಯೇ ಇಲ್ಲ. ನಮಗೆ ನೀರಿಲ್ಲ ಎಂದರು.
ಮುಡಾ ಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿಂದ ಆಗಿರುವ ತೀರ್ಮಾನಗಳನ್ನು ತಡೆ ಹಿಡಿಯಲು ಸೂಚಿಸಲಾಗಿದೆ. ಮುಂಗಾರು ವಿಳಂಬವಾಗಿರುವುದರಿಂದ ಕುಡಿಯುವ ನೀರು, ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಲಿ ಸೂಚಿಸಲಾಗಿದೆ ಎಂದರು.
ಮಂಗಳೂರು, ಉಡುಪಿ, ರಾಯಚೂರು, ಕೊಪ್ಪಳಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗಬಾರದು ಎಂದು ತಿಳಿಸಲಾಗಿದೆ. ಮೈಸೂರಿನಲ್ಲಿ ನೀರಿನ ತೊಂದರೆಯಾದರೆ ಸೂಕ್ತ ಯೋಜನೆ ತಯಾರು ಮಾಡಬೇಕು ಎಂದು ಸೂಚಿಸಿದೆ. ಜನರೊಂದಿಗೆ ಸೌಜನ್ಯ ದಿಂದ ವರ್ತಿಸಬೇಕು. ಹಿರಿಯ ಅಧಿಕಾರಿಗಳು ಕೆಳಗಿನ ಕಚೇರಿಗಳಿಗೆ ಆಗಾಗ್ಗೆ ಭೇಟಿ ನೀಡಿ, ಕ್ಷೇತ್ರ ಭೇಟಿಯನ್ನೂ ಮಾಡಲು ಸೂಚಿಸಿದೆ ಎಂದರು.