ಸುದ್ದಿಮೂಲ ವಾರ್ತೆ
ಜೂ,10:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.