ಚಿಂತಾಮಣಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಯಾಗಿ ನೌತಾಜ್
ಸುಧ್ಧಿಮೂಲ ವಾರ್ತೆ,
ಚಿಕ್ಕಬಳ್ಳಾಪುರ, ಜೂನ್.14 ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆಗಿ ಕಾರ್ಯನಿರ್ವಹಿಸುತ್ತಿರುವ ನೌತಾಜ್ ಅವರನ್ನು
ಹೆಚ್ಚುವರಿಯಾಗಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ವರ್ಗಾಯಿಸಿ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಸಿಡಿಪಿಓ ನೌತಾಜ್ ಅವರು ಚಿಂತಾಮಣಿ ತಾಲೂಕು ಸಿಡಿಪಿಓ ಆಗಿ ತಮ್ಮ ಅಧಿಕಾರವನ್ನು ಸ್ವೀಕರಿಸಿದ್ದಾರೆ
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜೊತೆಗೆ
ಮಕ್ಕಳ ಮತ್ತು ಮಹಿಳೆಯರ ಹಕ್ಕುಗಳ ಕುರಿತು ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸುತ್ತಿರುವ ಸಿಡಿಪಿಓ ನೌತಾಚ್ ಅವರ ಸೇವಾ ಕಾರ್ಯವೈಖರಿಯನ್ನು ಮೆಚ್ಚಿ ಹೆಚ್ಚುವರಿಯಾಗಿ ಚಿಂತಾಮಣಿ ತಾಲ್ಲೂಕಿನ
ಜವಾಬ್ದಾರಿಯನ್ನು ವಹಿಸಲಾಗಿದೆ.