ಸುದ್ದಿಮೂಲ ವಾರ್ತೆ
ಮೈಸೂರು, ಜೂ.17:ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಸಸ್ಯಾಹಾರ ಊಟ ಸಿಗಲಿದ್ದು, ಮಾಂಸಹಾರ ಪೂರೈಕೆ ಮಾಡಲ್ಲ. ಆದರೆ ಹೊರಗಡೆಯಿಂದ ಮಾಂಸಹಾರ ತಂದು ಅಲ್ಲಿ ತಿನ್ನಬಹುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್ ಸಿ.ಮಹಾದೇವಪ್ಪ ಹೇಳಿದ್ದಾರೆ
ಶನಿವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಸಚಿವರು, ಹಳೆಯ ಇಂದಿರಾ ಕ್ಯಾಂಟೀನ್ ಜೊತೆಗೆ ಹೊಸ ಇಂದಿರಾ ಕ್ಯಾಂಟಿನ್ ಗಳನ್ನು ಆರಂಭಿಸುವ ಪ್ರಸ್ತಾವ ಇದೆ. ಈಗ ಆ ಕ್ಯಾಂಟೀನ್ ನಲ್ಲಿ ಊಟ ಕೊಡಲಾಗುವುದು. ಮಾಂಸಹಾರ ನೀಡುವ ಬಗ್ಗೆ ಸದ್ಯಕ್ಕೆ ಚಿಂತನೆ ಇಲ್ಲ. ಆದರೆ ಮಾಂಸಾಹಾರಿಗಳು ಹೊರಗಡೆಯಿಂದ ತಂದು ಇಂದಿರಾ ಕ್ಯಾಂಟೀನ್ ನಲ್ಲಿ ತಿನ್ನಬಹುದು ಎಂದು ಪುನರುಚ್ಚರಿಸಿದರು.
ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸುವ ಯತ್ನ ನಡೆಯುತ್ತಿದೆ. ಚುನಾವಣಾ ವೇಳೆ ಐದು ಗ್ಯಾರಂಟಿಗಳನ್ನು ನೀಡಲಾಗಿತ್ತು. ಅದರಂತೆ ಐದು ಗ್ಯಾರಂಟಿಗಳಾದ ಉಚಿತ ವಿದ್ಯುತ್, ಉಚಿತ ಬಸ್ ಸೌಲಭ್ಯ, ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಆದರೆ, ಕೇಂದ್ರ ಸರ್ಕಾರ ಅಕ್ಕಿ ನೀಡಲು ಹಿಂದೇಟು ಹಾಕುತ್ತಿದೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ
ಸಿಎಂ ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈಗ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಅವರು ಮುಂದುವರೆಯುತ್ತಾರೆ ಎಂಬುದನ್ನೇ 3 ಬಾರಿ ಪುನರುಚ್ಚಾರ ಮಾಡಿ ಅಧಿಕಾರ ಹಸ್ತಾಂತರ ಬಗ್ಗೆ ಜಾಣ್ಮೆಯ ಉತ್ತರ ನೀಡಿದರು
ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋಲು ಕಂಡಿದ್ದೆ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ. ಸಾಕಷ್ಟು ಅಭಿವೃದ್ಧಿ ಮಾಡಿದ್ದರೂ. ಸೋತಾಗ ಕುಗ್ಗಲಿಲ್ಲ. ನಾನು ಯಾವತ್ತೂ ಟಿಕೆಟ್ ಕೇಳಿಲ್ಲ, ನನ್ನ ಹೋರಾಟ ನೋಡಿ ಟಿಕೆಟ್ ನೀಡಿದ್ದಾರೆ. ನಾನು ತೆರೆದ ಪುಸ್ತಕ, ಯಾರು ಬೇಕಾದರೂ ನೋಡಬಹುದು ಎಂದು ಹೇಳಿದರು.