ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.18: ವಿದ್ಯುತ್ ದರ ಏರಿಕೆ ಕುರಿತು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂ.22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ.
ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಎಫ್ಕೆಸಿಸಿಐ ಸರ್ಕಾರಕ್ಕೆ ಒಂದು ವಾರ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು
ಈ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎರಡು ತಿಂಗಳ ಹೆಚ್ಚುವರಿ ದರ ಸೇರಿ ಒಂದೇ ಬಿಲ್ ಬಂದಿದ್ದರಿಂದ ಈ ತಿಂಗಳು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳವಾಗಿದೆ ಎಂದು ಸಮರ್ಥಿಸಿ