ಸುದ್ದಿಮೂಲ ವಾರ್ತೆ
ತುಮಕೂರು,ಜೂ.20: ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ರೈತರ ಶೋಷಣೆ ಬಗ್ಗೆ ದೂರು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ ಎಚ್ಚರಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ರೈತರಿಗೆ
ಅನ್ಯಾಯ, ಅಕ್ರಮ ಕಂಡುಬಂದಲ್ಲಿ ಪರಾಮರ್ಶಿಸಿ ತಕ್ಷಣ ಕ್ರಮಕೈಗೊಳ್ಳಿ. ರೈತರಿಗೆ ತೊಂದರೆ ನೀಡುವವರಿಗೆ ಅಧಿಕಾರಿಗಳು ಯಾವುದೇ ಮಣೆ ಹಾಕದೆ, ರೈತಾಪಿ ವರ್ಗದವರಿಗೆ ಸರ್ಕಾರದ ಯೋಜನೆಯ ಲಾಭ ತಲುಪುವಂತೆ ಬದ್ಧತೆಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.
ರೈತರಿಂದ 84,102 ಕ್ವಿಂಟಾಲ್ ಕೊಬ್ಬರಿಯನ್ನು ತ್ವರಿತಗತಿಯಲ್ಲಿ ರೈತರಿಂದ ಖರೀದಿ ಮಾಡಲು ಜಿಲ್ಲಾಧಿಕಾರಿಗಳು ಕೃಷಿ ಮಾರಾಟ ಇಲಾಖೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿಗಳಿಗೆ ಸೂಚಿಸಿದರು.