ಸುದ್ದಿಮೂಲ ವಾರ್ತೆ
ರಾಮನಗರ, ಜೂ.25: ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯೋತ್ಸವ ಕಾರ್ಯಕ್ರಮನ್ನು ಇದೇ 27ರ ಮಂಗಳವಾರದಂದು ಹಳೇ ಬಸ್ಸು ನಿಲ್ದಾಣದ ಬಳಿಯ ಕೆಂಗಲ್ ಹನುಮಂತ್ಯಯ್ಯ ವೃತ್ತದಲ್ಲಿ ಆಯೋಜಿಸಲಾಗಿದೆ ಎಂದು ಕೆಂಪೇಗೌಡ ಜಯುಂತ್ಯೋತ್ಸವ ಸಮಿತಿ ಅಧ್ಯಕ್ಷ ಕೆ.ಚಂದ್ರಯ್ಯ ತಿಳಿಸಿದರು.
ನಗರದಲ್ಲಿರುವ ಒಕ್ಕಲಿಗರ ಸಂಘದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿ ಕೆಂಪೇಗೌಡರ ಜಯಂತಿಯನ್ನು ಕೆಂಪೇಗೌಡ ಜಯಂತ್ಯೋತ್ಸವ ಸಮಿತಿ ಮತ್ತು ತಾಲ್ಲೂಕು ಒಕ್ಕಲಿಗರ ಸಂಘ ಸಂಯುಕ್ತವಾಗಿ ಹಮ್ಮಿಕೊಂಡಿದೆ. ಜಾತಿ, ಧರ್ಮ ಬೇಧ ಮಾಡದೆ ಸಮಾಜದ ಎಲ್ಲ ನಾಗರೀಕರು ಭಾಗವಹಿಸಲು ಅವರು ಮನವಿ ಮಾಡಿದರು.
ಆದಿ ಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥಸ್ವಾಮೀಜಿ, ಅರ್ಚಕರಹಳ್ಳಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಕುಣಿಗಲ್ ಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ್ ಭಾಗವಹಿಸಲಿದ್ದಾರೆ.
ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸುವ ಕಾರ್ಯ ಕ್ರಮದಲ್ಲಿ ಶಾಸಕ ಎಚ್.ಸಿ.ಬಾಲಕೃಷ್ಣ, ಎಂಎಲ್ಸಿ ಎಸ್.ರವಿ, ಅ.ದೇವೇಗೌಡ, ಮಾಜಿ ಎಂಎಲ್ಸಿ ಸಿ.ಎಂ. ಲಿಂಗಪ್ಪ, ಮಾಜಿ ಶಾಸಕರಾದ ಕೆ.ರಾಜು, ಎ.ಮಂಜುನಾಥ್, ಅನಿತಾಕುಮಾರಸ್ವಾಮಿ, ಸಿ.ಪಿ.ಯೋಗೇ ಶ್ವರ್, ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು ಸೇರಿದಂತೆ ಹಲವು ಗಣ್ಯರು, ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾಹಿತಿ ಎಚ್.ಎಂ.ಬೋರಯ್ಯ ಉಪನ್ಯಾಸ ನೀಡಲಿದ್ದಾರೆ. ಕಡಬಗೆರೆ ಮುನಿರಾಜು ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಬಿ.ಚೇತನ್ಕುಮಾರ್, ಉಪಾಧ್ಯಕ್ಷ ಎಂ.ತಮ್ಮಯ್ಯ, ಸಹ ಕಾರ್ಯದರ್ಶಿ ಬೈರೇಗೌಡ, ನಿರ್ದೇಶಕ ಲೋಹಿತ್ ಕುಮಾರ್(ಬಾಬು), ಕೆಂಪೇಗೌಡ ಜಯುಂತ್ಯೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿ, ಕಾರ್ಯಾಧ್ಯಕ್ಷ ಜಿ.ಟಿ.ಕೃಷ್ಣ, ಉಪಾಧ್ಯಕ್ಷರಾದ ಸಿದ್ದರಾಮೇಗೌಡ, ಗೋಪಾಲಕೃಷ್ಣ ಜಂಟಿ ಕಾರ್ಯದರ್ಶಿ ಬಿಳಗುಂಬ ಪ್ರಸಾದ್, ಕಾಂಗ್ರೆಸ್ ಯುವ ಮುಖಂಡ ಗುರುಪ್ರಸಾದ್ ಸೇರಿದಂತೆ ಮತ್ತಿತರರು ಇದ್ದರು.