ಸುದ್ದಿಮೂಲ ವಾರ್ತೆ
ಮೈಸೂರು, ಜೂ.27 : ಇದೇ ಜೂನ್ 29 ರಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ತಮ್ಮ ಕಚೇರಿಯಲ್ಲಿ ಶಾಂತಿ ಸಭೆ ನಡೆಸಿ, ಹಿಂದೂ ಮತ್ತು ಮುಸ್ಲಿಂ ಜನಾಂಗದ ಮುಖಂಡರೊಂದಿಗೆ ಚರ್ಚಿಸಿದರು.
ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸಗಳಿಗೆ ಆಸ್ಪದ ನೀಡಬಾರದು.ಪ್ರಾರ್ಥನಾ ಸ್ಥಳಗಳ ಬಳಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಆಯುಕ್ತರು ಮನವಿ ಮಾಡಿದರು.
ಸಭೆಯಲ್ಲಿ ಡಿಸಿಪಿ ಗಳಾದ ಮುತ್ತುರಾಜ್ ಹಾಗೂ ಜಾಹ್ನವಿ,ನಗರ ಪಾಲಿಕೆ ಸದಸ್ಯರು,ವಿವಿದ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಳುಇದ್ದರು.