ಸುದ್ದಿಮೂಲ ವಾರ್ತೆ
ರಾಮನಗರ, ಜೂ 30 : ತಾಲ್ಲೂಕಿನ ಕೈಲಾಂಚ ಹೋಳಿಯ ಕೆ.ಜಿ. ಹೊಸಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಚನ ಸಾಹಿತ್ಯ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಎಲ್ಲೇಗೌಡ ಬೆಸಗರಹಳ್ಳಿ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಬೇಕು. ಪತ್ರಿಕೆ ಮತ್ತು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳುವ ಮೂಲಕ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ನಿವೃತ್ತ ಪ್ರಾಂಶುಪಾಲ ಕೆ.ಎಂ. ರಾಮಕೃಷ್ಣ ಮಾತನಾಡಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ನೆರವು ನೀಡುವ ಮೂಲಕ ಶಾಲೆಗಳ ಬಲವರ್ಧನೆಗೆ ಕೊಡುಗೆ ನೀಡಬೇಕು. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಗೀತಗಾಯನ ಕಾರ್ಯಕ್ರಮ ನಡೆಯಿತು. ಜಿಲ್ಲಾ ಲೇಖಕರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೂ.ಗಿ. ಗಿರಿಯಪ್ಪ , ಶಾಲೆಯ ಮುಖ್ಯ ಶಿಕ್ಷಕ ಹುಸೇನ್, ಶಿಕ್ಷಕರಾದ ಪ್ರಶಾಂತ್, ಅಕ್ಕಮ್ಮ, ಕವಿಗಳಾದ ಪೂರ್ಣಚಂದ್ರ, ಮೇದರದೊಡ್ಡಿ ಹನುಮಂತ, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಸ್. ರುದ್ರೇಶ್ವರ, ಗಾಯಕಿ ಎಚ್.ಎನ್. ವಿಜಯಶಂಕರ್, ಮುಖಂಡರಾದ ರಾಜು, ಸಿದ್ದೇಗೌಡ, ಮಂಗಳಗೌರಮ್ಮ, ಪುಟ್ಟಸ್ವಾಮಿ, ಕೆ.ಎಚ್. ಚಂದ್ರಶೇಖರಯ್ಯ ಇತರರು
ಇದ್ದರು.