ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಶನಿವಾರ ಮೊದಲ ಭೇಟಿ ಸಂದರ್ಭದಲ್ಲಿಹೊಸಪೇಟೆ ತಾಲ್ಲೂಕಿನ ಕಾರಿಗನೂರು ಬಳಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಹೊಸಪೇಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು.
ಇದೇ ವೇಳೆ ಘಟನೆಯಲ್ಲಿ ಮೃತಪಟ್ಟ ಬಳ್ಳಾರಿಯ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ವಿಮ್ಸ್ ಗೂ ಭೇಟಿ ನೀಡಿದರು.ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಯವರು ತಲಾ ಎರಡು ಲಕ್ಷ, ಜಿಲ್ಲಾ ಉಸ್ತುವಾರಿ ಸಚಿವರು ಎರಡು ಲಕ್ಷ ರೂ. ಘೋಷಿಸಿದ್ದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಿಂದ ಅವಕಾಶ ಇದ್ದರೆ ಪರಿಶೀಲಿಸಿ ಒಂದು ಲಕ್ಷ ರೂ. ಸೇರಿಸಿ ಒಟ್ಟು ಐದು ಲಕ್ಷ ರೂ. ಪ್ರತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಇದೇ ವೇಳೆ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.ಇದಕ್ಕೂ ಮುನ್ನ ಸಚಿವರು ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಪಘಾತ ಪ್ರಕರಣಗಳು ಈ ಭಾಗದಲ್ಲಿ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.