ಸುದ್ದಿಮೂಲ ವಾರ್ತೆ
ಮೈಸೂರು, ಜು.3 : ಇತಿಹಾಸ ಪ್ರಸಿದ್ಧ ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು.
ಚಾಮರಾಜೇಶ್ವರ ಸ್ವಾಮಿ ರಥೋತ್ಸವ ಮೂಲ, ಪೂರ್ವಾಷಾಢ ನಕ್ಷತ್ರದಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಶ್ರೀಮನ್ಮಹಾರಥಾರೋಹಣ ಜರುಗಿತು.
ಹೊಸರಥದಲ್ಲಿ 2 ನೇ ಚಾಮರಾಜೇಶ್ವರ ಕೆಂಪನಂಜಾಂಬದೇವಿ ಸಮೇತ ಮಹಾರಾಜರ ಮೂರ್ತಿ, ಗಣಪತಿ, ಸುಬ್ರಹ್ಮಣ್ಯೇಶ್ವರ ದೇವತೆಗಳು ಚಾಮರಾಜೇಶ್ವರಸ್ವಾಮಿಯವರ ಮಹಾರಥೋತ್ಸವಕ್ಕೆ ಮೆರಗು ನೀಡಿದ್ದವು. ಬೇರೆ,ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಹೊಸ ಜೋಡಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಹಣ್ಣು ಧವನ ಎಸೆದು ಸಂಭ್ರಮಿಸಿದರು.