ಸುದ್ದಿಮೂಲ ವಾರ್ತೆ
ಮೈಸೂರು, ಜು.5:ಸಂಸದ ಪ್ರತಾಪ್ ಸಿಂಹ ಅವರನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಗರದ ಜಲದರ್ಶಿನಿ ಅತಿಥಿಗೃಹದ ಬಳಿ ಬುಧವಾರ ನಡೆಯಿತು.
ಸಂಸದರ ಕಚೇರಿಯಿಂದ ಹೊರಬಂದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಸಂಸದರ ವಿರುದ್ಧ ಘೋಷಣೆಗಳನ್ನು ಕುಗುತ್ತಾ ಮುತ್ತಿಗೆ ಹಾಕಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದರು. ಬಳಿಕ, ಸಂಸದರು ಅಲ್ಲಿಂದ ಹೊರಟು ಹೋದರು.
ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿಯನ್ನು ಕೂಡಲೇ ರಾಜ್ಯಕ್ಕೆ ಕೊಡಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಪ್ರತಾಪ್ ಸಿಂಹ ಮತ್ತು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.