ಬಳ್ಳಾರಿ, ಜು. 13: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯವನ್ನು ಉದ್ಘಾಟಿಸಿದರು, ಇದಕ್ಕೂ ಮುನ್ನ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿದರು. ಬಳಿಕ ವಿವಿ ಆವರಣದಲ್ಲಿ ಸಂಪಿಗೆ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭಧಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ನಾಗೇಂದ್ರ,ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ನವದೆಹಲಿ ಅಧ್ಯಕ್ಷ ಡಾ. ಜೆ. ಕೆ., ಬಜಾಜ್, ಕುಲಪತಿ ಪ್ರೋ ಸಿದ್ದು ಪಿ ಆಲಗೂರು, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಪಂ ಸಿಇಒ ರಾಹುಲ್ ಸಂಕನೂರ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.