ಸುದ್ದಿಮೂಲ ವಾರ್ತೆ
ಬೆಂಗಳೂರು,ಜು.17:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ವಿಧಾನಸೌಧದಲ್ಲಿ ಭೇಟಿಯಾದ ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ ಇ ಓ ಬ್ರಾಂಡ್ ಚೆಂಗ್ ನೇತೃತ್ವದ ನಿಯೋಗದ ಜತೆ ಮಾತುಕತೆ ನಡೆಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ. ಪಾಟೀಲ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂಸ್ಥೆ ಫಾಕ್ಸ್ ಕಾನ್ ಸಂಸ್ಥೆಯ ಅಂಗ ಸಂಸ್ಥೆಯಾಗಿದ್ದು, ಆ್ಯಪಲ್ ಫೋನ್ ನ ಹೊರ ಕವಚ ತಯಾರಿಸುವ ಕೆಲಸ ಮಾಡಲಿದೆ. ಸುಮಾರು 8,800 ಕೋಟಿ ರೂಪಾಯಿ ಹೂಡಿಕೆ ಮಾಡಲು ಆಸಕ್ತಿ ತೋರಿಸಿದೆ.
ತುಮಕೂರಿನ ಬಳಿ ಇರುವ ಜಪಾನೀಸ್ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಅಗತ್ಯ 100 ಎಕರೆ ಭೂಮಿ ಇದ್ದು, ಉದ್ದಿಮೆ ಸ್ಥಾಪಿಸಲು ಒಳ್ಳೆಯ ವಾತಾವರಣ ಇದೆ. ಇದಕ್ಮೆ ರಾಜ್ಯ ಸರ್ಕಾರ ಕೂಡ ಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.