ಬೆಂಗಳೂರು, ಜು, 19; ಬಾಗಲಕೋಟೆಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಿಜಿಸ್ಟ್ರಾರ್ ಹಾಗೂ ಮಾಜಿ ಸಚಿವ ಎಂ.ಆರ್. ಸೀತಾರಾಂ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಎಂ.ಬಿ. ಲೋಕೇಶ್ ನಿಧನರಾದರು.
ಅವರಿಗೆ 50 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಮಾಜಿ ಸಚಿವ ಎಂ.ಆರ್. ಸೀತಾರಾಂ, ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಮತ್ತವರ ಕುಟುಂಬ ಸದಸ್ಯರು ಅಂತಿಮ ದರ್ಶನ ಪಡೆದು ಸಾಂತ್ವಾನ ಹೇಳಿದರು. ಗೊರಗುಂಟೆ ಪಾಳ್ಯದ ಎಸ್.ಆರ್.ಎಸ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.