ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.21: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 81ನೇ ಹುಟ್ಟುಹಬ್ಬದ ಅಂಗವಾಗಿ ಅವರನ್ನು ಸಚಿವ ಸಂಪುಟದ ಅನೇಕಕ ಸಚಿವರು ಮತ್ತು ಶಾಸಕರು, ಮುಖಂಡರು ಭೇಟಿ ಮಾಡಿ ಅಭಿನಂದಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡರಾದ ರವಿ ಬೋಸರಾಜು, ರವಿ ಪಾಟೀಲ್, ರಾಜಶೇಖರ ರಾಮಸ್ವಾಮಿ ಮತ್ತಿತರರು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.