ಸುದ್ದಿಮೂಲ ವಾರ್ತೆ
ಮೈಸೂರು, ಜು.23 : ಟ್ರಾನ್ಸ್ ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂನ ಲೈನ್ ಮನ್ ಸಾವನ್ನಪ್ಪಿರುವ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.
ಸಹಾಯಕ ಲೈನ್ಮ್ಯಾನ್ 26 ವರ್ಷದ ಸಂತೋಷ್ ಮೃತಪಟ್ಟವರು. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಮೃತ ಸಂತೋಷ್ ಪೋಷಕರು ಆರೋಪಿಸಿದ್ದು, ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು