ಸುದ್ದಿಮೂಲ ವಾರ್ತೆ
ಆನೇಕಲ್, ಜು 23 : ತಾಲೂಕಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಆನೇಕಲ್ ಉಪವಿಭಾಗದ ಸೂರ್ಯ ನಗರ ಆನೇಕಲ್ ಅತ್ತಿಬೆಲೆ ಸೇರಿದಂತೆ ಹಲವೆಡೆ ಆತಂಕಕಾರಿ ಘಟನೆಗಳು ನಡೆದ ಹಿನ್ನೆಲೆ ಪೊಲೀಸರು ರೌಡಿ ಪರೇಡ್ ನಡೆಸಿದರು.
ತಾಲೂಕಿನ ರಸ್ತೆಗಳಲ್ಲಿ ಲಾಂಗು ಹಿಡಿದು ಸಂಚರಿಸುವ ಮೂಲಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದರು.
ಸೂರ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮಸಂದ್ರದಲ್ಲಿ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದ್ದರು ಎನ್ನಲಾಗಿದೆ.
ಹೀಗಾಗಿ, ಸಾರ್ವಜನಿಕರು ರಸ್ತೆಗಳಲ್ಲಿ ಓಡಾಡಬೇಕಾದರೆ ಭಯ ಪಡುವಂಥ ಪರಿಸ್ಥಿತಿ ಎದುರಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಭಾನುವಾರ ಬೆಂಗಳೂರು ಹೆಚ್ಚುವರಿ ಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಆನೇಕಲ್ ಪೊಲೀಸ್ ವ್ಯಾಪ್ತಿಯಲ್ಲಿ ರೌಡಿ ಪರೇಡ್ ನಡೆಸಲಾಯಿತು.