ಸುದ್ದಿಮೂಲ ವಾರ್ತೆ
ಆನೇಕಲ್,ಜು.25: ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ಆನೇಕಲ್ ಪಟ್ಟಣದ ಅತ್ತಿಬೆಲೆ ಸರ್ಕಲ್ ನಲ್ಲಿ ದಲಿತ ಸಂಘರ್ಷ ಸಮಿತಿ, ಸಮಾನ ಮನಸ್ಕರ ಒಕ್ಕೂಟ ಮತ್ತು ಮಹಿಳಾ ಮೇಲಿನ ಅತ್ಯಾಚಾರ ವಿರೋಧಿ ಒಕ್ಕೂಟ ಸಹಯೋಗದಲ್ಲಿ ಸಾಂಕೇತಿಕ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.
ಅತ್ತಿಬೆಲೆ ಸರ್ಕಲ್ ನಲ್ಲಿ ಮಣಿಪುರ ಸರ್ಕಾರ ಮತ್ತು ಪ್ರಧಾನ ಮಂತ್ರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಆರೋಪಿಗಳಿಗೆ ಗಲ್ಲು ಶಿಕ್ಷೆ ಗೆ ಒತ್ತಾಯಿಸಿ ಧಿಕ್ಕಾರ ಕೂಗಿದರು.
ದಲಿತ ಸಂಘಟನೆ ಒಕ್ಕೂಟದ ಅಧ್ಯಕ್ಷ ರಾವಣ ಮಾತನಾಡಿ, ಸಂವಿಧಾನದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನವಿದೆ. ಮಣಿಪುರದಲ್ಲಿ ಅತ್ಯಾಚಾರ ಮಾಡಲು ಕಾರಣ ಆರ್ ಎಸ್ ಎಸ್ ಸಂಘಟನೆ. ಬಹಿರಂಗವಾಗಿ ಅವರ ಮೇಲೆ ಅತ್ಯಾಚಾರವನ್ನು ಎಸಗಿದ್ದಾರೆ. ಪ್ರಧಾನಮಂತ್ರಿ ಕೂಡ ಮೌನ ವಹಿಸಿರುವುದು ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮ ರಾಜ್ಯದ ಸರ್ಕಾರದ ವಿರುದ್ಧ ಕ್ರಮವನ್ನು ಕೈಗೊಳ್ಳಬೇಕು. ಅತ್ಯಾಚಾರ ಎಸಗಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕು ಎಂದು ಒತ್ತಾಯಿಸಿದರು.
ಮಹಿಳಾ ಹೋರಾಟಗಾರ್ತಿ ಪಾಪಮ್ಮ ಮಾತನಾಡಿ, ಬೆತ್ತಲೆಗೊಳಿಸಿ ಅವಮಾನಗೊಳಿಸಿದವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹ ಮಾಡಿದರು.
ಕಾರ್ಯಕ್ರಮದಲ್ಲಿ ದಲಿತ ಪರ ಸಂಘಟನೆ ಒಕ್ಕೂಟ ದಲಿತ ಸಂಘರ್ಷ ಸಮಿತಿ ಸಮಾನ ಮನಸ್ಕರ ಒಕ್ಕೂಟ ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು..