ಸುದ್ದಿಮೂಲ ವಾರ್ತೆ
ರಾಯಚೂರು, ಜು.26:ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ 12ನೇ ಘಟಿಕೋತ್ಸವವನ್ನು ಜು.28 ರಂದು ಹಮ್ಮಿಕೊಳ್ಳಲಾಗಿದೆ ಎಂದು ಉಪ ಕುಲಪತಿ ಡಾ.ಹನುಮಂತಪ್ಪ ತಿಳಿಸಿದರು.
ಅಂದು ಬೆಳಿಗ್ಗೆ ನಡೆಯುವ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಡಾ.ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿ ಪದವಿ ಪ್ರಧಾನ ಮಾಡಲಿದ್ದಾರೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನಿರ್ದೇಶಕ ಡಾ.ಹಿಮಾಂಶು ಪಾಠಕ್ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ.
332 ಸ್ನಾತಕ, 106 ಸ್ನಾತಕೋತ್ತರ, 42 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರಧಾನ ಮಾಡಲಾಗುತ್ತದೆ. ವಿವಿಧ ಪದವಿಯಲ್ಲಿ 218 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದಿದ್ದಾರೆ.
ವಿವಿಧ ಸಂಶೋಧನೆ ಗಳನ್ನು ನಿರಂತರವಾಗಿ ಮಾಡಲಾಗುತ್ತದೆ.35 ಕ್ಕೂ ಅಧಿಕ ಪ್ರಮಾಣದ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಶ್ವ ವಿದ್ಯಾಲಯಗಳ ಜೊತೆ ಸಂಶೋಧನೆ ಯಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಈ ವರ್ಷ ರಾಜ್ಯ ಸರ್ಕಾರ ಸಂಶೋಧನೆ, ಅಭಿವೃದ್ಧಿಗೆ 1ಕೋಟಿ ಅನುದಾನ ನೀಡಿದೆ ಇದು ಸಾಲದು. ರಾಷ್ಟ್ರೀಯ ಕೃಷಿ ವಿಕಾಸದ ಅಡಿ ಸುಮಾರು 17 ಕೋಟಿ ಕೇಂದ್ರ ಸರ್ಕಾರ ನೀಡಿದೆ. ಸಿರಿಧಾನ್ಯ ಮೇಳದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭರವಸೆ ಹಿನ್ನೆಲೆಯಲ್ಲಿ ಗ್ರಾಮೀಣ ಮೂಲ ಭೂತ ಸೌಕರ್ಯ ಅಭಿವೃದ್ಧಿ ಅಡಿ 25 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇ- ಸ್ಯಾಪ್ ಆ್ಯಪ್ ಗೆ ಕೇಂದ್ರ ಸರ್ಕಾರದಿಂದ 10 ಕೋಟಿ ಅನುದಾನ ಬರಲಿದೆ ಎಂದು ಮಾಹಿತಿ ನೀಡಿದರು.