ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.27: ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಬಿಡಿಸಿಸಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಡಿ.ಹನುಮಂತಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಮಾಜಿ ಅಧ್ಯಕ್ಷರಾದ ಬಿ.ಕೆಂಚಪ್ಪಗೌಡ ಅವರನ್ನು ಗೌರವ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಸಂಘದ ನಿರ್ದೇಶಕರಾದ ಎಚ್.ಎನ್.ಅಶೋಕ(ತಮ್ಮಾಜಿ) ಅವರ ಸಭಾ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಡಿ.ಹನುಮಂತಯ್ಯ ಸಂಘದ ಅಧ್ಯಕ್ಷರಾಗಿ, ಎಲ್.ಶ್ರೀನಿವಾಸ್ ಅವರು ಹಾಗೂ ಸಿ.ದೇವರಾಜು ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೆಚ್.ಸಿ.ಜಯಮುತ್ತು ಅವರು ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಸಹಾಯಕ ಕಾರ್ಯದರ್ಶಿಯಾಗಿ ವೆಂಕಟರಾಮೇಗೌಡರವರು ಮತ್ತು ಖಚಾಂಚಿಯಾಗಿ ಸಿ.ಎಂ.ಮಾರೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.