ತಿಪಟೂರು, ಜು 27 : ತಿಪಟೂರು ರೋಟರಿ ಸಂಸ್ಥೆ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯ ಬಾಣಂತಿಯರು ಮತ್ತು ಮಕ್ಕಳಿಗೆ ಉಚಿತ ಹೊದಿಕೆಗಳನ್ನು ವಿತರಣೆ ಮಾಡಲಾಯಿತು.
ಮುಖ್ಯ ವೈದ್ಯಾಧಿಕಾರಿ ಡಾ. ಶಿವಕುಮಾರ್ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿರುವ ಬಾಣಂತಿ ಮತ್ತು ಮಕ್ಕಳಿಗೆ ಹೊದಿಕೆಯನ್ನು ನೀಡಿರುವುದು ಉತ್ತಮ ಕಾರ್ಯ. ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ಮಾದರಿ ಆಸ್ಪತ್ರೆಯಾಗಿ ಮಾರ್ಪಾಡಾಗಲಿದೆ.
ರೋಗಿಗಳಿಗೆ ಇನ್ನೂ ಹೆಚ್ಚಿನ ಸೇವೆ ಒದಗಿಸಬೇಕೆಂದು ಮನವಿ ಮಾಡಿದರು.
ರೋಟರಿ ಅಧ್ಯಕ್ಷ ಕೃಷ್ಣಪ್ರಸಾದ್ ಮಾತನಾಡಿ, ರೋಟರಿ ಸಂಸ್ಥೆ ಆರೋಗ್ಯ, ಶಿಕ್ಷಣ, ಸಾಮಾಜಿಕ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡುತ್ತಿದ್ದು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ನಮ್ಮ ಸೇವೆ ತಲುಪಲಿದೆ. ಇದೇ ರೀತಿ ನಮ್ಮ ಸೇವೆ ಮುಂದುವರೆಯಲಿದೆ ಎಂದರು.
ಈ ಸಂದರ್ಭದಲ್ಲಿ ರೋಟರಿ ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರುಗಳು ಹಾಗೂ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಭಾಗವಹಿಸಿದ್ದರು.