ಸುದ್ದಿಮೂಲ ವಾರ್ತೆ
ಬೊಮ್ಮನಹಳ್ಳಿ, ಜು 27 : ಕಳೆದ ಬಾರಿ ಬೊಮ್ಮನಹಳ್ಳಿಯಲ್ಲಿ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿತ್ತು. ಈ ಬಾರಿ ಇಂತಹ ಸಮಸ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಚ್ಎಸ್ಆರ್ ಲೇಔಟ್ ಭಾಗದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತ ಅಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಮುಖವಾಗಿ ರಾಜಕಾಲುವೆ ಮತ್ತು ಕಸ ವಿಲೇವಾರಿ ಘಟಕಗಳನ್ನು ಬಿಬಿಎಂಪಿ ಅಧಿಕಾರಿಗಳ ಜೊತೆಗೂಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಮಳೆ ಸಂಬಂಧಿತ ಸಮಸ್ಯೆಗಳಿಗೆ ಕೈಗೊಳ್ಳಬಹುದಾದ ಮುಂಜಾಗ್ರತ ಕ್ರಮಗಳು, ಸಮರ್ಪಕ ಕಸ ವಿಲೇವಾರಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆಯನ್ನು ನಡೆಸಲಾಯಿತು.
ಬೊಮ್ಮನಹಳ್ಳಿ ಜಂಟಿ ಆಯುಕ್ತ ಅಜಿತ್ ಮಾತನಾಡಿ, ಒಣ ಕಸ ಮತ್ತು ಹಸಿ ಕಸ ವಿಂಗಡಣೆಯ ಬಗ್ಗೆ ಹೆಚ್ಚಿನ ಒತ್ತನ್ನು ನೀಡಲಾಗಿದೆ. ಸಮಸ್ಯೆಗಳ ಮೂಲ ಹುಡುಕಿ ಶೀಘ್ರವಾಗಿ ಸಮಸ್ಯೆಗಳ ಬಗ್ಗೆ ಪರಿಹಾರ ಒದಗಿಸುವುದು .ಪ್ರತಿ ಮನೆ ಮತ್ತು ಅಪಾರ್ಟ್ಮೆಂಟ್ ಗಳಲ್ಲಿ ಹಸಿ ಕಸ ಮತ್ತು ಒಣ ಕಸದ ಬಗ್ಗೆ ಜಾಗೃತಿ ಮೂಡಿಸುವುದು. ಕಸದ ಬ್ಲಾಕ್ ಸ್ಪಾಟ್ ಗಳನ್ನ ಕಡಿತಗೊಳಿಸಬೇಕಾಗಿದೆ. ಆದ್ದರಿಂದ ಸ್ವಚ್ಛತೆಯ ಜೊತೆಗೆ ಸಮಯ ಉಳಿತಾಯವಾಗಲಿದೆ. ಈ ನಿಟ್ಟಿನಲ್ಲಿ ಕುದ್ದು ಬಿಬಿಎಂಪಿ ಅಧಿಕಾರಿಗಳ ಜೊತೆ ಗೂಡಿ ಜಾಗೃತಿಯನ್ನು ಮೂಡಿಸಲಾಗಿದೆ ಎಂದು ತಿಳಿಸಿದರು.