ಸುದ್ದಿಮೂಲವಾರ್ತೆ
ಕೊಪ್ಪಳ,ಜು.28:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ವತಿಯಿಂದ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ 3 ವಿದ್ಯಾರ್ಥಿನಿಯರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದರು.
ಈ ಪ್ರಕರಣ ಸಂಬಂಧಿಸಿದಂತೆ ಘಟನೆಯನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ. ವಿಡಿಯೋ ಒತ್ತಾಯ ಮಾಡಿದ ವಿದ್ಯಾರ್ಥಿನಿಯರನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಎಬಿವಿಪಿ ಕೊಪ್ಪಳ ಒತ್ತಾಯಿಸಿದೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕಿರುವ ಪೊಲೀಸರು, ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು. ವಿಡಿಯೋ ಚಿತ್ರೀಕರಣದ ಹಿಂದೆ ಷಡ್ಯಂತ್ರವಿದ್ದು, ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದು ಒತ್ತಾಯಿಸಲಾಯಿತು.ಜಿಲ್ಲಾ ಆಡಳಿತ ಕಛೇರಿ ಮುಂದೆ ಪ್ರತಿಭಟನೆ ಮಾಡಿ ಜಿಲ್ಲಾ ಅಧಿಕಾರಿ ಮನವಿ ಸಲ್ಲಿಸಲಾಯಿತು.
ಎಬಿವಿಪಿ ಜಿಲ್ಲಾ ಸಂಚಾಲಕ ಶಶಾಂಕ್ ಪಾಟೀಲ್ ಮಾತನಾಡಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಜಿಲ್ಲಾ ಸಹ ಸಂಚಾಲಕರಾದ ಅಕ್ಷತಾ ಹಿರೇಮಠ್, ವಿದ್ಯಾರ್ಥಿನಿ ಪ್ರಮುಖ ಶೋಭಿತಾ, ಹಮ್ಮಿಗೇಶ್, ಪ್ರಸಾದ್ ವಿರೂಪಾಕ್ಷಯ್ಯ, ಕೃಷ್ಣ,ಅನಿಕೇತ್, ಶಿವಾನಂದ್, ಅರುಣ್, ಶಿವಕುಮಾರ್, ಲಕ್ಷ್ಮಣ್ ಇತರೆ ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು.