ಸುದ್ದಿಮೂಲವಾರ್ತೆ
ಕೊಪ್ಪಳ,ಆ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಹಲಗೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಗಸ್ಟ್ 03ರಂದು “ವಿಶ್ವ ಸ್ತನ್ಯಪಾನ ಸಪ್ತಾಹ” ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಮಾತನಾಡಿ, ಪ್ರತಿ ವರ್ಷ ಆಗಸ್ಟ್ ತಿಂಗಳ ಮೊದಲನೇ ವಾರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತದೆ. ಇದರ ಉದ್ದೇಶ ಪ್ರತಿ ಗರ್ಭಿಣಿ, ಭಾಣಂತಿಯರಿಗೆ, ಶಿಶುವಿಗೆ ಎದೆಹಾಲು ಕುಡಿಸುವ ಕುರಿತು ಅರಿವು ಮೂಡಿಸುವುದಾಗಿದೆ. ಭಾರತ ಹಳ್ಳಿಗಳ ದೇಶ, ಹಳ್ಳಿಗಳು ಅಭಿವೃದ್ಧಿಯಾದರೇ ದೇಶ ಅಭಿವೃದ್ಧಿಯಾದಂತೆ, ಪ್ರತ್ರಿಯೊಬ್ಬ ತಾಯಂದಿರು ಇದರ ಬಗ್ಗೆ ತಿಳಿದುಕೊಂಡು ಇತರರಿಗೂ ತಿಳಿಸಬೇಕೆಂದು ಹೇಳಿದರು.
ಭಾಗ್ಯನಗರ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ರೋಜನ್ನ ಅವರು ಮಾತನಾಡಿ, ರಕ್ತಹಿನತೆ, ತೀವ್ರಗೊಂಡ ಮಿಷನ್ ಇಂದ್ರಧನುಷ್ ಅಭಿಯಾನ 5.0 ಹಾಗೂ ತಾಯಿಮಕ್ಕಳ ಆರೈಕೆ ಕುರಿತು ವಿವರವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯರಾದ ಸರೋಜಾ ಅವರು ಪೌಷ್ಠಿಕ ಆಹಾರ ಮತ್ತು ವೈಯಕ್ತಿಕ ಸ್ವಚ್ಛತೆ ಕುರಿತು ವಿವರವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಸುಮಾ ಹಿರೇಮಠ, ಅಂಗನವಾಡಿ ಕಾರ್ಯಕರ್ತೆಯರಾದ ರಾಜೇಶ್ವರಿ, ಸುವರ್ಣ, ಗಾಯತ್ರಿ, ಅಂಬುಜಾ, ಸ.ಆ.ಅಧಿಕಾರಿ ಕವಿತಾ, ಆಶಾ ಕಾರ್ಯಕರ್ತೆಯರಾದ ಜ್ಯೋತಿ, ರಜಿಯಾ, ರೇಣುಕಾ ಸೇರಿದಂತೆ ಸ್ತ್ರೀಶಕ್ತಿ ಸಂಘದ ಸದಸ್ಯರು, ಗರ್ಭಿಣಿಯರು, ಬಾಣಂತಿಯರು ಕಾರ್ಯಕ್ರದಲ್ಲಿ ಭಾಗವಹಿಸಿದ್ದರು.