ಸುದ್ದಿಮೂಲ ವಾರ್ತೆ
ಬೆಂಗಳೂರು, ಆ.9: ಕೃಷಿ ಸಚಿವ ಚಲುವರಾಸ್ವಾಮಿ ಅವರು ಇಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಕೃಷಿ ಅಧಿಕಾರಿಗಳು ಬರೆದಿದ್ದರು ಎನ್ನಲಾದ ನಕಲಿ ಪತ್ರದ ಬಗ್ಗೆ ವಿವರಿಸಿದರು.
ಈ ಸಂಬಂಧ ಈಗಾಗಲೇ ಸರ್ಕಾರ ಪ್ರಕಣವನ್ನು ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆ ರಾಜ್ಯಪಾಲರ ಗಮನಕ್ಕೆ ತಂದರು.
ರಾಜಭವನದಲ್ಲಿಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಭೇಟಿ ಮಾಡಿ ತಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಹಾಗೂ ಕೃಷಿ ಅಧಿಕಾರಿಗಳು ಬರೆದಿದ್ದರು ಎನ್ನಲಾದ ನಕಲಿ ಪತ್ರದ ಬಗ್ಗೆ ವಿವರಿಸಿದರು.
ಈ ಪ್ರಕರಣ ಸಂಬಂಧ ಈಗಾಗಲೇ ಸರ್ಕಾರ ಪ್ರಕಣವನ್ನು ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದರು.
ಶಾಸಕರಾದ ಪಿ.ಎಂ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡ್ಡಿಸಿದ್ದೇಗೌಡ, ರವಿಗಣಿಗಾ, ಕೆ.ಎಂ ಉದಯ್ ಗೌಡ, ದಿನೇಶ್ ಗೂಳಿಗೌಡ, ಮಧು ಮಾದೇಗೌಡ ಹಾಗೂ ಮಾಜಿ ಶಾಸಕರಾದ ಹೊನ್ನಲಗೆರೆ ರಾಮಕೃಷ್ಣ, ಶ್ರೀ ಕೆ.ಬಿ ಚಂದ್ರಶೇಖರ್ ರವರ ನಿಯೋಗವು ಭೇಟಿ ಮಾಡಿ ವಿವರಣೆ ನೀಡಿತು.
ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ನಕಲಿ ಪತ್ರದ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇದ್ದಾರೆ. ಇದು ಒಳ್ಳೆಯ ರಾಜಕಾರಣ ಅಲ್ಲ. ಇದನ್ನು ಅವರು ತಿದ್ದಿಕೊಳ್ಳಬೇಕು. ಅಧಿಕಾರಿಗಳ ಹೆಸರಿನಲ್ಲಿ ಬಂದ ಪತ್ರ ನಕಲಿ ಎಂದು ರಾಜ್ಯಪಾಲರಿಗೂ ಮನವಿರಿಕೆಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವರ ಆಡಳಿತ ವೈಖರಿಯನ್ನು ನೋಡಲಾಗದೆ ಕುಮಾರಸ್ವಾಮಿ ಅವರು ಪದೇ ಪದೇ ವಿದೇಶಗಳಿಗೆ ಹೋಗುತ್ತಿದ್ದಾರೆ ಎಂದು ಲೇವಡಿ ಮಾಡಿದರು.