ಸುದ್ದಿಮೂಲ ವಾರ್ತೆ
ತುಮಕೂರು,ಆ.10 :ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಮಕೂರು ವತಿಯಿಂದ ಅರಿಯೂರು ಗ್ರಾಮದ ಸಿದ್ಧಗಂಗಾ ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ತುಮಕೂರು ತಾಲೂಕಿನ ಯೋಜನಾಧಿಕಾರಿ ಮತ್ತು ಅರೆಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಯೋಜನಾಧಿಕಾರಿ ಸುನಿತಾ ಪ್ರಭು, ಯೋಜನೆಯ ಕಾರ್ಯಕ್ರಮಗಳು ಸುಜ್ಞಾನ ನಿಧಿ ಯೋಜನೆ ಪರಿಸರ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರತಿ ವಿದ್ಯಾರ್ಥಿ ಕನಿಷ್ಠ 2 ಗಿಡಗಳನ್ನು ತಮ್ಮ ಮನೆಯ ಮುಂದೆ ಬೆಳೆಸಬೇಕು ಎಂದು ಕರೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವಕಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ದಯಾನಂದ ರವರು ಪರಿಸರ ಸಂರಕ್ಷಣೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸ್ವರ್ಣಂಬ ರವರು ಮಕ್ಕಳಲ್ಲಿ ಪರಿಸರದ ಬಗ್ಗೆ ಸಾಮಾಜಿಕ ಕಳಕಳಿಯ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಲಿತಮ್ಮ, ಗ್ರಾಮ ಪಂಚಾಯತಿ ಸದಸ್ಯರು, ದಯಾನಂದ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ವಲಯ ಹಾಗೂ ಕೃಷಿ ಮೇಲ್ವಿಚಾರಕ ಅನುಕುಮಾರ್, ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.