ಸುದ್ದಿಮೂಲ ವಾರ್ತೆ
ದೇವನಹಳ್ಳಿ,ಆ.11: ತಾಲೂಕಿನ ಚನ್ನಹಳ್ಳಿ ಪ್ರೌಢಶಾಲಾ ಆವರಣದಲ್ಲಿ ನಡೆಯುತ್ತಿರುವ ಚನ್ನರಾಯಪಟ್ಟಣ ಹೋಬಳಿ ಮಟ್ಟದ ಕ್ರೀಡಾ ಕೂಟದಲ್ಲಿ ಯಲಿಯೂರು ಸರ್ಕಾರಿ ಪ್ರೌಢಶಾಲಾ ವಿಧ್ಯಾರ್ಥಿಗಳು ಕಬಡ್ಡಿ ಪಂದ್ಯದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಮಟ್ಟದಲ್ಲಿ ನಡೆಯುತ್ತಿರುವ ಕ್ರೀಡಾ ಕೂಟದಲ್ಲಿ ಯಲಿಯೂರು ಸರ್ಕಾರಿ ಶಾಲೆಯ ವಿಧ್ಯಾರ್ಥಿಗಳು ಕಬಡ್ಡಿ ಸೇರಿದಂತೆ ಅನೇಕ ಪಂದ್ಯಗಳಲ್ಲಿ ಭಾಗವಹಿಸಿದ್ದರು.
ಸನ್ ರೈಸ್ ಇಂಟರ್ ನ್ಯಾಷನಲ್ ಸ್ಕೂಲ್ ಗಂಗವಾರ ಶಾಲೆಯ ವಿದ್ಯಾರ್ಥಿಗಳನ್ನು ಮಣಿಸಿ ಫೈನಲ್ ಮ್ಯಾಚ್ ನಲ್ಲಿ ಬೂದಿಗೆರೆಯ ಸ್ಟರ್ಲಿಂಗ್ ಶಾಲೆಯನ್ನು ಸೋಲಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.