ಸುದ್ದಿಮೂಲ ವಾರ್ತೆ
ತುಮಕೂರು, ಆ.11 : ನಗರದ ಅಮಾನಿಕೆರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 12 ಶನಿವಾರ ಮತ್ತು 13 ಭಾನುವಾರದಂದು ಎರಡು ದಿನಗಳ ಕಾಲ ಮಹಿಳೆಯರಿಗೆ ಉಚಿತ ಬೋಟಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ನಾಗರಿಕರು ಸೋಮವಾರದಿಂದ ನಿಗದಿತ ಶುಲ್ಕವನ್ನು ಪಾವತಿಸಿ ಬೋಟಿಂಗ್ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಶುಕ್ರವಾರ ಅಮಾನಿಕೆರೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಬೋಟಿಂಗ್ ಮಾಡಿದರು.