ಸುದ್ದಿಮೂಲ ವಾರ್ತೆ
ಬೆಂಗಳೂರು, ಆ.15: 77ನೇ ಸ್ವಾತಂತ್ರ್ಯೋತ್ಸವವನ್ನು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಇಂದು ಚೋಳೂರು ಪಾಳ್ಯದಲ್ಲಿರುವ ಎಬಿಸಿಡಿ ಆಟದ ಮೈದಾನ ಆಚರಿಸಿತು.
ಸ್ವಾತಂತ್ರ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ಯೋಗಭ್ಯಾಸ ಕಾರ್ಯಕ್ರಮ, ಪಥ ಸಂಚಲನ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ನಡೆಸಲಾಯಿತು.
ಈ ಕಾರ್ಯಕ್ರಮಕ್ಕೆ ಶಾಸಕ ಎಂ. ಕೃಷ್ಣಪ್ಪ, ರಾಮ ಮನೋಹರ್ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಮಳವಳ್ಳಿ ಬಿ.ಎಸ್. ಶಿವಣ್ಣ ಮತ್ತು ಯೋಗ ಶಿಕ್ಷಕ ಎಂ. ಸತೀಶ್ ಇವರುಗಳ ಉಪಸ್ಥಿತಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು.