ಸುದ್ದಿಮೂಲ ವಾರ್ತೆ
ಕುಷ್ಟಗಿ, ಆ. 16:ಕುಷ್ಟಗಿ ತಾಲೂಕಿನ ಹಿರೇಮುಕರ್ತಿನಾಳ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದಿದ್ದಾನೆ.
ಹಿರೆಮುಕರ್ತಿನಾಳ ಗ್ರಾಮದ 25 ವರ್ಷ ವಯಸ್ಸಿನ ನಾಗರಾಜ ತಂದೆ ಕಂಬಣ್ಣ ಹಿರೆಮನ್ನಾಪುರ ಎಂಬುವವರು ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಮುಕರ್ತಿನಾಳ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ತಾವರಗೇರಾ ರಾಂಪುರ ತಾವರಗೇರಾ ಮಾರ್ಗದ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಯುವಕನ ತಲೆಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲೇ ಅಸುನೀಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.