ಸುದ್ದಿಮೂಲ ವಾರ್ತೆ
ಹೊಸಕೋಟೆ,ಆ.21: ಸೌಜನ್ಯಾ ಕೊಲೆ ಪ್ರಕರಣದಲ್ಲಿ ನೈಜ್ಯ ಆರೋಪಿಗೆ ಶಿಕ್ಷೆಯಾಗಬೇಕು, ಮಣಿಪುರದಲ್ಲಿ ನೆಡೆದ ಬೆತ್ತಲೆ ಮೆರವಣಿಗೆಯ ಕಾರಣಕರ್ತರಿಗೆ ಸೂಕ್ತ ಶಿಕ್ಷೆಯಾಗಬೇಕು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅವಮಾನಿಸಿದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ನಗರದ ತಾಲೂಕು ಕಚೇರಿ ಮುಂಬಾಗ ಪ್ರತಿಭಟನಾ ಧರಣಿ ಹಮ್ಮಿಕೊಂಡು ತಾಲೂಕು ಉಪ ತಹಸೀಲ್ದಾರ್ ಪ್ರಭಾಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ದೇಶದಲ್ಲಿ ಡಾ ಬಿ ಆರ್ ಅಂಬೇಡ್ಕರ್ರಚಿಸಿದ ಸಂವಿಧಾನವನ್ನು ತಿರುಚುವ ಕೆಲಸ ಹಾಗೂ ಸಂವಿಧಾನಕ್ಕೆ ಅವಮಾನ ಮಾಡುವ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಕೂಡಲೆ ಕೇಂದ್ರ ಸರ್ಕಾರ ಇದರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ದೇಶಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಸಮಿತಿಯ ಸಂಚಾಲಕರಾದ ಸಿ ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ.
ಈ ಪ್ರತಿಭಟನಾ ಧರಣಿಯಲ್ಲಿ ತರಬಳ್ಳಿ ವೆಂಕಟಸ್ವಾಮಿ, ಎಸ್. ನಾರಾಯಣಸ್ವಾಮಿ ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.