ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ ,ಸೆ. 2:ಕೃಷಿ ಇಲಾಖೆಯಲ್ಲಿ 2023-24ನೇ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಹೋಬಳಿ ರೈತ ಸಂಪರ್ಕ ಕೇಂದ್ರ, ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಖಾಲಿಯಿರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಪದವಿ, ಕೃಷಿ ವಿಭಾಗದಲ್ಲಿ ಪದವಿ ಪಡೆದಿರಬೇಕು. ಅರ್ಜಿಗಳನ್ನು ಸೆಪ್ಟೆಂಬರ್ 11 ರ ಸಂಜೆ 5 ಗಂಟೆಯೊಳಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸಬೇಕೆಂದು ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.