ಸುದ್ದಿಮೂಲ ವಾರ್ತೆ
ಹೊಸಕೋಟೆ,ಸೆ.11: ತಾಲೂಕಿನ ಸೂಲಿಬೆಲೆ ಹೋಬಳಿಯ ತೆನೆಯೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಎಸ್.ಆಂಜಿನಪ್ಪ ಹಾಗೂ ಉಪಾಧ್ಯಕ್ಷರಾಗಿ ಟಿ.ಎನ್.ದೇವರಾಜ್ ಆಯ್ಕೆಯಾಗಿದ್ದಾರೆ.
ನಿರ್ದೆಶಕರುಗಳಾಗಿ ಚಿಕ್ಕಣ್ಣ,ರಾಘವೇಂದ್ರ, ಕಾಳಪ್ಪ, ಕೃಷ್ಣಪ್ಪ, ಸುಬ್ಬಯ್ಯ,ಶೋಭಾ,ಸುಮಾ,ಮಂಜುನಾಥ್, ಸೀತಪ್ಪ, ದೇವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರುಗಳನ್ನು ಅಭಿನಂದಿಸಿದರು.