ಸುದ್ದಿಮೂಲ ವಾರ್ತೆ
ಬೆಂಗಳೂರು, ಸೆ.12: ಉತ್ತರ ಪ್ರದೇಶ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಮಂಗಳವಾರ ಕೆಸ್ಆರ್ಟಿಸಿ ಕೇಂದ್ರ ಕಚೇರಿಗೆ ಭೇಟಿ ನೀಡಿ ನಿಗಮ ಅನುಷ್ಠಾನ ಮಾಡಿರುವ ಹೊಸ ಉಪಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮಾಹಿತಿ ಪಡೆದರು.
ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಸಲಹೆಗಾರ ಡಾ. ಕೆ.ವಿ ರಾಜು, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ
ಎಲ್. ವೆಂಕಟೇಶ್ವರಲು, ವೃತ್ತಿಪರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಂ.ಕೆ. ಷಣ್ಮುಗ ಸುಂದರಂ ಅವರ ತಂಡವು ಕೇಂದ್ರ ಕಚೇರಿಗೆ ಭೇಟಿ ನೀಡಿತ್ತು.
ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೆಟಿ ಮಾಡಿ ರಾಜ್ಯ ಸಾರಿಗೆ ಇಲಾಖೆಯ ಬಗ್ಗೆ ಮಾಹಿತಿಗಳನ್ನು ಪಡೆದರು. ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಭುಕುಮಾರ್ ಅವರು ಮಾಹಿತಿ ಒದಗಿಸಿದರು.
ತಂಡವು, ನಂತರದಲ್ಲಿ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4 ಕ್ಕೆ ಭೇಟಿ ನೀಡಿ, ನಿಗಮದ ಪ್ರತಿಷ್ಟಿತ ವಾಹನಗಳಾದ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್ ಅಂಬಾರಿ ಉತ್ಸವ ವಾಹನಗಳ ಕಾರ್ಯಾಚರಣೆ, ತಾಂತ್ರಿಕ ನಿರ್ವಹಣೆಯ ಬಗ್ಗೆ ಮಾಹಿತಿ ಹಾಗೂ ಎಲೆಕ್ಟ್ರಿಕ್ ಬಸ್ಸುಗಳ ಘಟಕ ಮತ್ತು ಚಾರ್ಜಿಂಗ್ ಸ್ಟೇಷನ್ಗೆ ಭೇಟಿ ನೀಡಿದರು.