ಸುದ್ದಿಮೂಲ ವಾರ್ತೆ
ಬೆಂಗಳೂರು,ಸೆ.21:ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಹಾಗೂ ಸಿದ್ದಯ್ಯ ರಾಚಯ್ಯ ಅವರುಗಳು ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.
ರಾಜಭವನದ ಬ್ಯಾಂಕ್ವೆಟ್ ಹಾಲ್ನಲ್ಲಿ ಗುರುವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.
ಸಮಾರಂಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವರಾಳೆ ಸೇರಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.