ಸುದ್ದಿಮೂಲವಾರ್ತೆ
ಕೊಪ್ಪಳ,ಸೆ.22: ನಾವು ಬೇಕಿದ್ದರೆ ರಕ್ತ ಕೊಟ್ಟೇವು. ಯಾವುದೇ ಕಾರಣಕ್ಕೆ ನೀರು ಬಿಡೇವು ಎಂಬ ಘೋಷಣೆಯೊಂದಿಗೆ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯಿತು. ಬಿಎಸ್ಎನ್ ಎಲ್ ಕಚೇರಿ ಮುತ್ತಿಗೆ ಹಾಕಲು ಹೊರಟ ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ತೆಗೆದುಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದಿಂದ ರಾಜ್ಯದಿಂದ ಕಾವೇರಿ ನೀರನ್ನು ತಮಿಳು ನಾಡಿಗೆ ಬಿಡೋದಕ್ಕೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಕಾವೇರಿ ನಮ್ಮದು. ಕೇಂದ್ರ ಸರಕಾರ ಮಲತಾಯಿ ಧೋರಣೆ ಹೊಂದಿದೆ. ಕೇಂದ್ರ ಸರಕಾರ ಮಧ್ಯಸ್ತಿಕೆ ವಹಿಸಿ ಸಮಸ್ಯೆ ಬಗೆಹರಿಸಬಹುದು ಆದರೆ ಕೇಂದ್ರ ನಮ್ಮ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದು ಆರೋಪಿಸಿ ಪ್ರತಿಭಟಿಸಿದರು.
ನಗರದಲ್ಲಿ ಮೆರವಣಿಗೆ ನಡೆಸಿ ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದರು. ಅದಕ್ಕೆ ತಡೆಯೊಡ್ಡಿದ ಪೊಲೀಸರು ಪ್ರತಿಭಟನಾಕಾರರನ್ನು ವಶ ಪಡೆದರು.
ಈ ಸಂದರ್ಭದಲ್ಲಿ ಗಿರೀಶಾನಂದ, ಮಂಜುನಾಥ ಆನೇಗೊಂದಿ, ನಿಂಗಪ್ಪ ಮೂಗಿನ, ವಿಜಯಕುಮಾರ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.